ಸುಬ್ರಹ್ಮಣ್ಯ: ಪಶು ಆಸ್ಪತ್ರೆ ಕಟ್ಟಡಕ್ಕೆ ಸಚಿವ ಎಸ್.ಅಂಗಾರ ಅವರಿಂದ ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 08. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಪಶು ವೈದ್ಯಕೀಯ ವ್ಯವಸ್ಥೆಗಳನ್ನು ಸಮಗ್ರವಾಗಿ ಅಭಿವೃದ್ಧಿಯ ಹಿತದೃಷ್ಠಿಯಿಂದ ಸಂಬಂಧಪಟ್ಟ ಪಶು ಸಂಗೋಪನಾ ಸಚಿವರಲ್ಲಿ ಚರ್ಚೆ ನಡೆಸಲಾಗಿದೆ ಎಂದು ಒಳನಾಡು ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್.ಅಂಗಾರ ಅವರು ಹೇಳಿದರು.

 

ದ.ಕ ಜಿ.ಪಂ. ಮಂಗಳೂರು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮಂಗಳೂರು ಇದರ ಆರ್‌.ಐಡಿಎಫ್- 25 ಯೋಜನೆಯಡಿಯಲ್ಲಿ ಮಂಜೂರಾದ ಅನುದಾನದಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಪಶು ಆಸ್ಪತ್ರೆ ಕಟ್ಟಡಕ್ಕೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಅಲ್ಲದೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಬೇಕು ಎಂದು ಹೇಳಿದ್ದಾರೆ. ಕ್ಷೇತ್ರದ ಪಶು ಚಿಕಿತ್ಸಾಲಯಗಳಲ್ಲಿ ವೈದ್ಯರ ಕೊರತೆ ನೀಗಿಸಲು ಸೂಕ್ತ ಕ್ರಮ ವಹಿಸಲು ಸಚಿವರಲ್ಲಿ ವಿನಂತಿಸಿದ್ದಾರೆ. ಗ್ರಾಮೀಣ ಪ್ರದೇಶಗಳನ್ನು ಒಳಗೊಂಡ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಪಶುಪಾಲನೆ ಮತ್ತು ಹೈನುಗಾರಿಕೆ ರೈತರ ಪ್ರಧಾನ ಉಪಕಸುಬು ಆದುದರಿಂದ ಇಲ್ಲಿ ಆಧುನಿಕ ವ್ಯವಸ್ಥೆಗಳನ್ನು ಒಳಗೊಂಡ ಪಶು ಆಸ್ಪತ್ರೆಗಳ ನಿರ್ಮಾಣ ಅತ್ಯವಶ್ಯಕವಾಗಿದೆ. ಇದಕ್ಕೆ ಪೂರಕವಾಗಿ ಸರಕಾರವು ಸ್ಪಂಧಿಸುತ್ತಿದೆ ಎಂದರು. ಪುರೋಹಿತ ಪ್ರಸನ್ನ ಭಟ್ ವಿವಿಧ ವೈದಿಕ ವಿಧಿವಿಧಾನಗಳನ್ನು ನೆರವೇರಿಸಿದ ಬಳಿಕ ಸಚಿವರು ಶಂಕುಸ್ಥಾಪನೆ ಮಾಡಿದರು. ತದನಂತರ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

Also Read  ಜಾಗದ ವಿಚಾರ- ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೈದು, ಬೆದರಿಕೆಯೊಡ್ಡಿದ ಪುತ್ರಿಯರು..! ➤ ದೂರು ದಾಖಲು

ಈ ಸಂದರ್ಭದಲ್ಲಿ ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾ.ಪಂ.ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಜಿ.ಪಂ.ಸದಸ್ಯೆ ಆಶಾ ತಿಮ್ಮಪ್ಪ, ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಪ್ರಸನ್ನ ಕುಮಾರ್ ಟಿ.ಜಿ, ಇಲಾಖಾಧಿಕಾರಿಗಳು, ಗ್ರಾ.ಪಂ.ಸದಸ್ಯರು, ಗ್ರಾಮಸ್ಥರು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Also Read  ಬಂಟ್ವಾಳ: ಮಗುಚಿಬಿದ್ದು ರಿಕ್ಷಾ ಜಖಂ ➤ 50 ಲೀ. ಹಾಲು ರಸ್ತೆಪಾಲು

error: Content is protected !!
Scroll to Top