ವಿಟ್ಲ: ಬೈಕ್ – ಬೊಲೆರೋ ನಡುವೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು



(ನ್ಯೂಸ್ ಕಡಬ) newskadaba.com ವಿಟ್ಲ, ಫೆ.08. ಬೈಕ್ ಹಾಗೂ ಬೊಲೆರೋ ನಡುವೆ ನಡೆದ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರದಂದು ವಿಟ್ಲ ಸಮೀಪದ ಕಾಶಿಮಠ ಎಂಬಲ್ಲಿ ನಡೆದಿದೆ.





ಮೃತ ಸವಾರನನ್ನು ಮಾಣಿ ಸಮೀಪದ ಬರಿಮಾರು ನಿವಾಸಿ ಬಾಲಕೃಷ್ಣ(55) ಎಂದು ಗುರುತಿಸಲಾಗಿದೆ. ವಿಟ್ಲದಿಂದ ಉಕ್ಕುಡ ಕಡೆಗೆ ತೆರಳುತ್ತಿದ್ದ ಬೈಕಿಗೆ ಹಿಂದಿನಿಂದ ಬೊಲೆರೋ ಢಿಕ್ಕಿ ಹೊಡೆದಿದ್ದು, ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರ ಬಾಲಕೃಷ್ಣ ರವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ತಂಡ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಿಟ್ಲ ಸರಕಾರ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.






 

error: Content is protected !!
Scroll to Top