ಕಡಬ: ತಾಯಿ ಹಾಗೂ ಮಗಳ ಮೇಲೆ ಆ್ಯಸಿಡ್ ಎರಚಿದ ಪ್ರಕರಣ ➤ ಆರೋಪಿಯ ಜಾಮೀನು ರದ್ದುಪಡಿಸಿದ ಹೈಕೋರ್ಟ್…! ? ಆರೋಪಿಯನ್ನು ಮರಳಿ ಜೈಲಿಗೆ ಕಳುಹಿಸುವಂತೆ ಕಡಬ ಪೊಲೀಸರಿಗೆ ಆದೇಶ

(ನ್ಯೂಸ್ ಕಡಬ) newskadaba.com ಕಡಬ, ಫೆ. 10. ಕೋಡಿಂಬಾಳದಲ್ಲಿ ತಾಯಿ ಹಾಗೂ ಆಕೆಯ ಎರಡು ವರ್ಷದ ಮಗಳ ಮೇಲೆ ಆ್ಯಸಿಡ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ವಿಚಾರಣಾ ನ್ಯಾಯಾಲಯವು ನೀಡಿದ್ದ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿ, ಆರೋಪಿಯನ್ನು ಪುನಃ ಜೈಲಿಗೆ ಹಾಕುವಂತೆ ಕಡಬ ಪೊಲೀಸರಿಗೆ ನಿರ್ದೇಶನ ನೀಡಿದೆ.

ಆರೋಪಿಗೆ ವಿಚಾರಣಾ ನ್ಯಾಯಾಲಯವು ನೀಡಿದ್ದ ಜಾಮೀನು ಆದೇಶವನ್ನು ರದ್ದುಪಡಿಸುವಂತೆ ಸಂತ್ರಸ್ತೆ ಮಹಿಳೆಯು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ಆರೋಪಿಯ ಜಾಮೀನು ರದ್ದುಪಡಿಸಿ ಆದೇಶ ಹೊರಡಿಸಿದೆ. ಆರೋಪಿಯನ್ನು ಕೂಡಲೇ ವಶಕ್ಕೆ ಪಡೆದು ಜೈಲಿಗೆ ಕಳಹಿಸುವಂತೆ ಕಡಬ ಠಾಣಾ ಪೊಲೀಸರಿಗೆ ನಿರ್ದೇಶನ ನೀಡಿದೆ.

error: Content is protected !!

Join the Group

Join WhatsApp Group