? ಮರಕ್ಕೆ ಢಿಕ್ಕಿ ಹೊಡೆದು ಕಾರು ಪಲ್ಟಿ ➤ ನಾಲ್ವರು ಸ್ಥಳದಲ್ಲೇ ಮೃತ್ಯು, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ರಾಜಸ್ಥಾನ, ಫೆ. 10. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಾಗೌರ್​ ನ ನಾಗಡಿ ರಸ್ತೆಯಲ್ಲಿ ನಡೆದಿದೆ.

ವೇಗವಾಗಿ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು, ಮರಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯ ಕುರಿತು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಪವರ್ ಸ್ಟಾರ್ ನಿಧನದ ಹಿನ್ನೆಲೆ ➤ ನಾಳೆ (ಅ. 30) ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

error: Content is protected !!