ಕಡಬ: ತೋಟಕ್ಕೆ ತೆರಳಿದವರ ಮೇಲೆ ಚಿರತೆ ದಾಳಿ ? ಇಬ್ಬರು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಫೆ.12. ಚಿರತೆ ದಾಳಿಯಿಂದಾಗಿ ಓರ್ವ ಮಹಿಳೆ ಹಾಗೂ ಓರ್ವ ಪುರುಷ ಗಾಯಗೊಂಡ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ರೆಂಜಿಲಾಡಿ ಎಂಬಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ.

ಗಾಯಗೊಂಡವರನ್ನು ರೆಂಜಿಲಾಡಿಯ ಹೇರ  ನಿವಾಸಿಗಳಾದ ಶೇಖರ್ ಕಾಮತ್ ಹಾಗೂ ಸೌಮ್ಯ ಕಾಮತ್ ಎಂದು ಗುರುತಿಸಲಾಗಿದೆ. ಇವರಿಬ್ಬರು ತೋಟದಲ್ಲಿ ಪೈಪ್ ಜೆಟ್ ಬದಲಾಯಿಸಲೆಂದು ತೆರಳಿದ್ದ ವೇಳೆ ಚಿರತೆ ದಾಳಿ ನಡೆಸಿದ್ದು, ತಕ್ಷಣವೇ ಇಬ್ಬರನ್ನೂ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಚಿರತೆಯು ಸ್ಥಳದಲ್ಲಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಚಿರತೆಯ ಹಿಡಿಯುವ ಕಾರ್ಯಾಚರಣೆ ಆರಂಭಿಸಿದ್ದಾರೆ.

Also Read  ಕಡಬ: ಕಾಲೇಜು ವಿದ್ಯಾರ್ಥಿನಿಯರಿಗೆ ಆ್ಯಸಿಡ್ ಎರಚಿದ ಪ್ರಕರಣ ಆರೋಪಿಯ ಜಾಮೀನು ಅರ್ಜಿ ವಜಾ

error: Content is protected !!
Scroll to Top