ಕಾಪು: ಬೈಕ್ ಹಾಗೂ ಟೆಂಪೋ ಟ್ರಾವೆಲರ್ ನಡುವೆ ಢಿಕ್ಕಿ ➤ ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 12. ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಟ್ರಾವೆಲರ್ ಬೈಕ್‍ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಡುಪಿ ಕಾಪುವಿನಲ್ಲಿ ನಡೆದಿದೆ.

ಕಾಪು ಕಡೆಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಬೈಕ್‍ ಗೆ, ಕೇರಳದಿಂದ ಕೊಲ್ಲೂರು ಕಡೆಗೆ ಸಾಗುತ್ತಿದ್ದ ಟೂರಿಸ್ಟ್ ಟೆಂಪೋವೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಢಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಟೆಂಪೋ ಕಂದಕಕ್ಕೆ ವಾಲಿ ನಿಂತಿದ್ದು, ಘಟನಾ ಸ್ಥಳಕ್ಕೆ ಕಾಪು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಮನೆಗೆ ಸೋಡಾ ಬಾಟಲಿ ಎಸೆತ, ಕಿಟಕಿ ಗಾಜಿಗೆ ಹಾನಿ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

error: Content is protected !!