(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.13. ಕೆಎಸ್ಸಾರ್ಟಿಸಿ ಬಸ್ ಹಾಗೂ ಆಲ್ಟೋ ಕಾರು ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಎಂಬಲ್ಲಿ ಶನಿವಾರದಂದು ನಡೆದಿದೆ.
ಕೊಕ್ಕಡದ ಪಟ್ರಮೆ ನಿವಾಸಿಗಳಿದ್ದ ಆಲ್ಟೋ ಕಾರು ಹಾಗ ಬಸ್ ನಡುವೆ ಅಡ್ಡಹೊಳೆ ಎಂಬಲ್ಲಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಮಕ್ಕಳು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.