ದಕ್ಷಿಣ ಕನ್ನಡ ಜಿ.ಪಂ. ಸಿಇಒ ಡಾ.ಸೆಲ್ವಮಣಿ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 13. ದ.ಕ. ಜಿಲ್ಲಾ ಪಂಚಾಯತ್ ಸಿಇಒ ಆಗಿದ್ದ ಡಾ.ಸೆಲ್ವಮಣಿ ಆರ್. ಅವರು ಕೋಲಾರದ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದು, ದ.ಕ ಜಿಲ್ಲೆಗೆ ನೂತನ ಸಿಇಒ ಆಗಿ ಕುಮಾರ್ ಎಂಬವರು ನಿಯೋಜನೆಗೊಂಡಿದ್ದಾರೆ.

ಕುಮಾರ್ ಅವರು ಚಿಕ್ಕಮಗಳೂರು ಜಿಲ್ಲೆಯ ಎಡಿಸಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದಕ್ಕೂ ಮೊದಲು ದ.ಕ. ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು.

Scroll to Top