? ನೆಲ್ಯಾಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಅಪಘಾತ ಪ್ರಕರಣ ➤ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ. 14. ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಶನಿವಾರದಂದು ಢಿಕ್ಕಿ ಸಂಭವಿಸಿದ್ದು, ಪರಿಣಾಮ ಗಂಭೀರ ಗಾಯಗೊಂಡಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.


ಮೃತ ಮಹಿಳೆಯನ್ನು ಕೊಕ್ಕಡ ಪಟ್ರಮೆ ನಿವಾಸಿ ಮರಿಯಮ್ಮ (59) ಎಂದು ಗುರುತಿಸಲಾಗಿದೆ. ಇವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ವಿರುದ್ದ ದಿಕ್ಕಿನಿಂದ ಬಂದ ಬಸ್ ನಡುವೆ ಅಡ್ಡಹೊಳೆ ಎಂಬಲ್ಲಿ ಅಪಘಾತ ಸಂಭವಿಸಿತ್ತು. ಪರಿಣಾಮ ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯಗಳಾಗಿದ್ದು, ಇವರ ಪೈಕಿ ಮಹಿಳೆಯೋರ್ವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Scroll to Top