ಸುಳ್ಯ: ಯುವ ಸಾಹಿತಿ ಸಮ್ಯಕ್ತ್ ಹೆಚ್. ಜೈನ್ ಗೆ ರಾಜ್ಯ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 14. ಇಲ್ಲಿನ ಚಂದನ ಸಾಹಿತ್ಯ ವೇದಿಕೆಯ ದಶಮಾನೋತ್ಸವ ಹಾಗೂ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಸುಳ್ಯ ಇದರ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಸುಳ್ಯ ಎಪಿಎಂಸಿ ಸಭಾಭವನದಲ್ಲಿ ಭಾನುವಾರದಂದು ನಡೆದ ಕವಿ ಸಂಗಮ- ಕವಿ ಸಂಭ್ರಮ ಕಾರ್ಯಕ್ರಮದಲ್ಲಿ 2021ನೇ ಸಾಲಿನ “ಸಾಹಿತ್ಯ ರತ್ನ” ರಾಜ್ಯ ಪ್ರಶಸ್ತಿ ವಿಜೇತ ಯುವ ಸಾಹಿತಿ ಸಮ್ಯಕ್ತ್ ಜೈನ್ ಅವರಿಗೆ ಹಿರಿಯ ಸಾಹಿತಿಗಳ ಸಮ್ಮುಖದಲ್ಲಿ  ಸನ್ಮಾನಿಸಲಾಯಿತು.

 

ಈ ಸಂದರ್ಭ ಹಿರಿಯ ಸಾಹಿತಿಗಳಾದ ನಾರಾಯಣ ರೈ ಕುಕ್ಕುವಳ್ಳಿ, ಹರಿನರಸಿಂಹ ಉಪಾಧ್ಯಾಯ, ಮಹಾಂತಪ್ಪ ಮೇಟಿ ಗೌಡ ರಾಯಚೂರು, ಗುರುಢವಳೇಶ್ವರ ಹುಬ್ಬಳ್ಳಿ, ಭೀಮರಾವ್, ಸಾನು ಉಬರಡ್ಕ, ಸುಮಾ ಕಿರಣ್ ಉಡುಪಿ ಮೊದಲಾದವರು ಉಪಸ್ಥಿತರಿದ್ದರು. ಇವರು ನೂಜಿಬಾಳ್ತಿಲ ಹೊಸಂಗಡಿ ಬಸದಿ ಧರಣೇಂದ್ರ ಇಂದ್ರ-ಮಂಜುಳಾ ದಂಪತಿಯ ಪುತ್ರ.

Also Read   ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ➤ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿ ಆಹ್ವಾನ

error: Content is protected !!
Scroll to Top