? ಬೆಳ್ತಂಗಡಿ: ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 16. ಬೈಕ್ ಹಾಗೂ ನೀರು ಸಾಗಿಸುವ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುಂಡದಬೆಟ್ಟು ಎಂಬಲ್ಲಿ ನಡೆದಿದೆ.

ಮೃತ ಯುವಕನನ್ನು ಗೋಳಿಯಂಗಡಿ ನಿವಾಸಿ ಸಾದಿಕ್ ಎಂದು ಗುರುತಿಸಲಾಗಿದೆ. ಕುಂಡದಬೆಟ್ಟು ಬಳಿ ರಸ್ತೆ ಕಾಮಗಾರಿಯು ನಡೆಯುತ್ತಿದ್ದು ಅದಕ್ಕೆ ನೀರು ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಮತ್ತು ಸಾದಿಕ್ ಬರುತ್ತಿದ್ದ ದ್ವಿಚಕ್ರ ವಾಹನದ ನಡುವೆ ಪರಸ್ಪರ ಢಿಕ್ಕಿ ಹೊಡೆದು, ಸಾದಿಕ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮೂಡಬಿದ್ರೆ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Scroll to Top