ಮಲ್ಪೆ: ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಲ್ಪೆ, ಫೆ. 20. ಬೋಟಿನಿಂದ ಸಮುದ್ರಕ್ಕೆ ಬಿದ್ದ ಪರಿಣಾಮ ಮೀನುಗಾರನೋರ್ವ ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ.

ಮೃತಪಟ್ಟವರನ್ನು ವಿಶ್ವನಾಥ(48) ಎಂದು ಗುರುತಿಸಲಾಗಿದೆ. ಇವರು ಫೆ.16 ರಂದು ಮಹಾಬಲೇಶ್ವರ ಎಂಬ ಹೆಸರಿನ ಮೀನುಗಾರಿಕಾ ಬೋಟ್‍ ನಲ್ಲಿ ಇತರ ಮೀನುಗಾರರೊಂದಿಗೆ ಮೀನುಗಾರಿಕೆಗೆಂದು ತೆರಳಿದ್ದು, ಫೆ.17 ರಂದು ಮೀನುಗಾರಿಕೆ ನಡೆಸುತ್ತಿದ್ದ ವೇಳೆ, ಅಲೆಗಳ ಹೊಡೆತಕ್ಕೆ ಸಿಲುಕಿ ವಿಶ್ವನಾಥ ಅವರು ಬೋಟ್‍ನಿಂದ ನೀರಿಗೆ ಬಿದ್ದಿದ್ದಾರೆ. ಈ ವೇಳೆ ಬೋಟ್‍ನಲ್ಲಿದ್ದ ಇತರರು ಎಷ್ಟೇ ಹುಡುಕಾಡಿದರು ಅವರು ಪತ್ತೆಯಾಗಿರಲಿಲ್ಲ. ಬಳಿಕ ಶುಕ್ರವಾರದಂದು ಸಂಜೆ ವೇಳೆಗೆ ನೀರಿಗೆ ಬಿದ್ದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಈ ಕುರಿತು ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

death

Scroll to Top