ಕಡಬ: ಅಣ್ಣ ಹಾಗೂ ದೊಡ್ಡಪ್ಪನಿಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಫೆ.20. ಅಪ್ರಾಪ್ತ ಬಾಲಕಿಯ ಮೇಲೆ ಸ್ವಂತ ಅಣ್ಣ ಹಾಗೂ ದೊಡ್ಡಪ್ಪ ಅತ್ಯಾಚಾರ ಎಸಗಿರುವ ಘಟನೆ ಕಡಬದಲ್ಲಿ ನಡೆದಿದೆ.

ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ನಿವಾಸಿ ಹದಿನೈದರ ಹರೆಯದ ಅಪ್ರಾಪ್ತ ಬಾಲಕಿಯ ಮೇಲೆ ಸ್ವಂತ ಅಣ್ಣನೇ ಅತ್ಯಾಚಾರ ನಡೆಸಿರುವುದಾಗಿ ತಿಳಿದುಬಂದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರು ವಿಚಾರಣೆ ನಡೆಸಿದಾಗ ದೊಡ್ಡಪ್ಪ ಕೂಡಾ ಅತ್ಯಾಚಾರಗೈದಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಕಡಬ ಠಾಣೆಗೆ ದೂರು ನೀಡಲಾಗಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಕಡಬ ಪೊಲೀಸರು ಆರೋಪಿಗಳಾದ ಅಪ್ರಾಪ್ತೆಯ ಅಣ್ಣ ಹಾಗೂ ದೊಡ್ಡಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Also Read  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಆಭರಣಗಳು ಲೂಟಿ ➤ ಆಡಳಿತ ಮಂಡಳಿಯ ಮೇಲೆಯೇ ದೂರು ದಾಖಲು

error: Content is protected !!
Scroll to Top