ಜುಲೈ 07 ಹಾಗೂ 08 ರಂದು ಸಿಇಟಿ ಪರೀಕ್ಷೆ ➤ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 21. 2021ನೆ ಸಾಲಿನ ವೃತ್ತಿಪರ ಕೋರ್ಸುಗಳ ಸಿಇಟಿ ಪರೀಕ್ಷೆಯು ಜುಲೈ 7 ಮತ್ತು 8ರಂದು ನಡೆಯಲಿದ್ದು, ಇದರ ವೇಳಾಪಟ್ಟಿಯನ್ನು ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಪ್ರಕಟಿಸಿದ್ದಾರೆ.

ಸಿಇಟಿ ಪರೀಕ್ಷಾ ವೇಳಾಪಟ್ಟಿ ಹೀಗಿದೆ:- ಜುಲೈ 7ರಂದು ಬೆಳಗ್ಗೆ 10.30ರಿಂದ 11.50ರವರೆಗೆ ಜೀವವಿಜ್ಞಾನ, ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತ, ಜು. 08 ರಂದು ಬೆಳಗ್ಗೆ 10.30 ರಿಂದ 11.50ರವರೆಗೆ ಭೌತ ವಿಜ್ಞಾನ, ಮಧ್ಯಾಹ್ನ 2.30 ರಿಂದ 3.50ರವರೆಗೆ ರಸಾಯನ ವಿಜ್ಞಾನ, ಜು.9ರಂದು ಬೆಳಗ್ಗೆ 11.30ರಿಂದ 12.30ರವರೆಗೆ ಕನ್ನಡ ಪರೀಕ್ಷೆ ನಡೆಯಲಿದೆ ಎಂದು ಹೇಳಿದ್ದಾರೆ.

Also Read  ಪಿಯು ಉಪನ್ಯಾಸಕರಿಗೆ ಸಿಹಿಸುದ್ದಿ- ನ. 20 ರಿಂದ ನೇಮಕಾತಿಗೆ ಸೂಚನೆ ➤ ಸಚಿವ ಸುರೇಶ್ ಕುಮಾರ್

error: Content is protected !!
Scroll to Top