ಮಾಣಿ: ಕಾರಿಗೆ ಢಿಕ್ಕಿ ಹೊಡೆದ ಲಾರಿ ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ‌.25. ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಹಳೀರ ಎಂಬಲ್ಲಿ ಗುರುವಾರದಂದು ನಡೆದಿದೆ.

ಮಂಗಳೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಲಾರಿಯನ್ನು ಚಾಲಕ ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಎದುರಿನಿಂದ ತೆರಳುತ್ತಿದ್ದ ಆಲ್ಟೋ ಕಾರಿಗೆ ಢಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ.

 

Also Read  ಸಾರ್ವಜನಿಕರಿಗೆ ರಕ್ಷಣೆ ನೀಡಲು ಮುಂದಾದ ನೀತಿ ತಂಡ ➤ ತುರ್ತು ಸ್ಪಂದನೆಗೆ ನೀತಿ ರಕ್ಷಣಾ ತಂಡ ಸನ್ನದ್ಧ

error: Content is protected !!