ನೆಲ್ಯಾಡಿ: ಲಾರಿ ಚಾಲಕನನ್ನು ತಿವಿದು ಕೊಂದ ಕಾಡಾನೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.26. ಕಾಡಾನೆ ದಾಳಿ ನಡೆಸಿದ ಪರಿಣಾಮ ಲಾರಿ ಚಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಶಿರಾಡಿ ಘಾಟ್‌ನ ಕೆಂಪುಹೊಳೆ ಸಮೀಪ ಗುರುವಾರ ರಾತ್ರಿ ನಡೆದಿದೆ.


ಮೃತ ಲಾರಿ ಚಾಲಕನನ್ನು ರಾಜಸ್ಥಾನ ಮೂಲದವನೆಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಚಾಲಕ ಕೆಂಪುಹೊಳೆ ಸಮೀಪ ಲಾರಿ ನಿಲ್ಲಿಸಿ ಮೂತ್ರ ವಿಸರ್ಜನೆಗೆಂದು ತೆರಳಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

 

 

Scroll to Top