ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ – ಡೀಸೆಲ್ ಟ್ಯಾಂಕರ್ ನಡುವೆ ಮುಖಾಮುಖಿ ಢಿಕ್ಕಿ ➤ ಬೆಳ್ಳಂಬೆಳಗ್ಗೆ ನಡೆಯಿತು ಅಪಘಾತ



(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.27. ಅನಿಲ ಸಾಗಾಟದ ಟ್ಯಾಂಕರ್ ಹಾಗೂ ಡೀಸೆಲ್ ಟ್ಯಾಂಕರ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಡೀಸೆಲ್ ಟ್ಯಾಂಕರ್ ಚಾಲಕ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಹೊಸಮಜಲು ಎಂಬಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.





ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಬೆಂಗಳೂರಿನತ್ತ ತೆರಳುತ್ತಿದ್ದ ಟ್ಯಾಂಕರ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಡೀಸೆಲ್‌ನ ಟ್ಯಾಂಕರ್ ನಡುವೆ ಹೊಸಮಜಲು ಸಮೀಪ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡಿರುವ ಡೀಸೆಲ್‌ ಟ್ಯಾಂಕರ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top