ಪುತ್ತೂರಿನ ಯುವ ವಕೀಲೆ ವಿದ್ಯಾ ಎ.ಎಸ್ ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 27. ‌ಕರ್ನಾಟಕ ಉಚ್ಚ ನ್ಯಾಯಾಲಯದ 2020ನೇ ಸಿವಿಲ್ ಜಡ್ಜ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಫೆ. 25ರಂದು ಹೊರಡಿಸಿದ ಅಧಿಸೂಚನೆಯಂತೆ ಪುತ್ತೂರಿನ ನ್ಯಾಯವಾದಿ ವಿದ್ಯಾ ಎ.ಎಸ್. ಅವರು ಸಿವಿಲ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ.

ಕರ್ನಾಟಕ ಉಚ್ಛ ನ್ಯಾಯಾಲಯದ ಅಧೀನದಲ್ಲಿ ಸಿವಿಲ್ ನ್ಯಾಯಾಧೀಶರ ನೇಮಕಾತಿ ಕಮಿಟಿಯವರು ಕಳೆದ ನವೆಂಬರ್ ತಿಂಗಳಲ್ಲಿ ಸಿವಿಲ್ ಜಡ್ಜ್ ಹುದ್ದೆಗೆ ಲಿಖಿತ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತ್ತು . ಅದರಲ್ಲಿ ತೇರ್ಗಡೆ ಹೊಂದಿದವರಿಗೆ ಇದೇ ತಿಂಗಳು ಸಂದರ್ಶನವನ್ನೂ ಅಯೋಜಿಸಿತ್ತು. ಈ ಎರಡರಲ್ಲೂ ತೇರ್ಗಡೆ ಹೊಂದಿದ ವಿದ್ಯಾರವರು ಸಿವಿಲ್ ನ್ಯಾಯಾಧೀಶರಾಗಿ ನೇರ ನೇಮಕಾತಿ ಹೊಂದಿದ್ದಾರೆ. ವಿದ್ಯಾ ಎ.ಎಸ್ ಒಳಮೊಗ್ರು ಗ್ರಾಮದ ಪರ್ಪುಂಜದ ಶಿವಕುಮಾರ್ ಹಾಗೂ ಪಾರ್ವತಿ ದಂಪತಿಯ ಪುತ್ರಿ. ಇವರು ಕಳೆದ ಏಳು ವರ್ಷಗಳಿಂದ ಪುತ್ತೂರಿನಲ್ಲಿ ವಕೀಲ ವೃತ್ತಿ ನಿರ್ವಹಿಸುತ್ತಿದ್ದಾರೆ. ನ್ಯಾಯವಾದಿ ಸೂರ್ಯನಾರಾಯಣ ಎನ್.ಕೆ.ಅವರ ಬಳಿ ಜೂನಿಯರ್ ವಕೀಲರಾಗಿ ಇವರು ವೃತ್ತಿ ನಿರ್ವಹಿಸುತ್ತಿದ್ದರು. ಸಂಪ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಕುಂಬ್ರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢ ಶಿಕ್ಷಣ ಮತ್ತು ದ್ವಿತೀಯ ಪಿಯುಸಿ ಶಿಕ್ಷಣ ಪೂರೈಸಿದ್ದ ವಿದ್ಯಾ ಎ.ಎಸ್.ಅವರು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದುಕೊಂಡಿದ್ದರು.

Also Read  ಕೆಮ್ಮಾಯಿ ಮುಈನುಲ್ ಇಸ್ಲಾಂ ಜಮಾಅತ್ ಕಮಿಟಿಯ ಮಹಾ ಸಭೆ ➤ ಎ.ಕೆ. ಬಶೀರ್ ಹಾಜಿ ಅಧ್ಯಕ್ಷರಾಗಿ ಪುನರಾಯ್ಕೆ

error: Content is protected !!
Scroll to Top