ಎಸ್ಸೆಸ್ಸೆಲ್ಸಿ ಅಂತಿಮ ವೇಳಾಪಟ್ಟಿ ಪ್ರಕಟ ➤ ಜೂ. 21ರಿಂದ ಜುಲೈ 05ರ ವರೆಗೆ ಪರೀಕ್ಷೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 02. ಕೋವಿಡ್ ಕಾರಣದಿಂದಾಗಿ ತಡವಾಗಿ ಶಾಲೆಗಳು ಆರಂಭವಾಗಿರುವ ಹಿನ್ನೆಲೆ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮಾರ್ಚ್ ತಿಂಗಳ ಬದಲು ಜೂನ್ 21 ರಿಂದ ಜುಲೈ 5 ರವರೆಗೆ ನಡೆಯಲಿವೆ ಎಂದು ಶಿಕ್ಷಣ ಸಚಿವ ತಿಳಿಸಿದ್ದಾರೆ‌.

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಿರುವ ಅವರು ಈ ಮೊದಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದ್ದು, ಇದಕ್ಕೆ ಸಂಬಂಧಪಟ್ಟಂತೆ ಸಲಹೆ, ಮನವಿಗಳನ್ನು ಪರಿಗಣಿಸಿ ಇದೀಗ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದರು. ಜೂನ್ 21 ರಂದು ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ, ಜೂ. 24 ರಂದು ಗಣಿತ, ಜೂ. 28 ರಂದು ವಿಜ್ಞಾನ, ಜೂ. 30 ರಂದು ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಜುಲೈ 2 ರಂದು ದ್ವಿತೀಯ ಭಾಷೆ ಇಂಗ್ಲಿಷ್/ಕನ್ನಡ, ಜುಲೈ 5 ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Also Read  ಆಂಬ್ಯುಲೆನ್ಸ್ ಹಾಗೂ ಆಲ್ಟೋ 800 ಕಾರಿನ ನಡುವೆ ಭೀಕರ ಅಪಘಾತ - ಮೂವರು ದಾರುಣ ಮೃತ್ಯು

error: Content is protected !!
Scroll to Top