ಸಿಡಿ ರಿಲೀಸ್ ಮಾಡಿದ ವ್ಯಕ್ತಿಗೆ ಶುರುವಾಯಿತು ಸಂಕಷ್ಟ ➤ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ



(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 03. ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆಯೆ ಸಿಡಿ ಬಿಡುಗಡೆ ಮಾಡಿದ ವ್ಯಕ್ತಿಯ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ರಮೇಶ್ ಜಾರಕಿಹೊಳಿ ಸಹೋದರ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.





ವೈರಲ್ ವಿಡಿಯೋ ವಿವಾದಕ್ಕೆ ಸಂಬಂಧಿಸಿ, ಮುಖ್ಯಮಂತ್ರಿಯವರೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದೊಂದು ನಕಲಿ ಸಿಡಿಯಾಗಿದೆ. ಇದರ ಹಿಂದೆ ಪ್ರಭಾವಿಗಳ ಕೈವಾಡವಿದೆ ಎಂದು ಹೇಳಿದ್ದಾರೆ. ಜಾರಕಿಹೊಳಿ ಕುಟುಂಬದ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ ಹೀಗಾಗಿ ಘಟನೆಯ ಸತ್ಯಾಸತ್ಯತೆಯ ಕುರಿತು ಸಿಬಿಐ ತನಿಖೆ ನಡೆಸಲು ಸಿಎಂಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.






error: Content is protected !!
Scroll to Top