ರಮೇಶ್ ಜಾರಕಿಹೊಳಿ ರಾಜೀನಾಮೆ ಬೆನ್ನಲ್ಲೇ ಬೆಂಬಲಿಗರಿಂದ 8ಕ್ಕೂ ಅಧಿಕ ಬಸ್ ಗಳ ಮೇಲೆ ಕಲ್ಲು ತೂರಾಟ



(ನ್ಯೂಸ್ ಕಡಬ) newskadaba.com ಬೆಳಗಾವಿ, ಮಾ. 05. ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಬೆಂಬಲಿಗರಿಂದ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ 8ಕ್ಕೂ ಅಧಿಕ ಬಸ್‌ಗಳ ಮೇಲೆ‌ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.





ಗೋಕಾಕ್ ನಗರದ ಕೇಂದ್ರ ಬಸ್ ನಿಲ್ದಾಣಲ್ಲಿ ಪ್ರಯಾಣಿಕರನ್ನು ತುಂಬಿಕೊಂಡು ನಿಂತಿದ್ದ ಬಸ್​ಗಳ ಮೇಲೆ ಏಕಾಏಕಿ 10ಕ್ಕೂ ಹೆಚ್ಚು ಬೈಕ್​ಗಳಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಬಸ್​ನ ಹಿಂಬದಿ ಹಾಗೂ ಮುಂಭಾಗದ ಗಾಜುಗಳಿಗೆ ಹಾನಿಯಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಲ್ಲು ತೂರಾಟ ನಡೆಸಿ ಪರಾರಿಯಾಗಿರುವ ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.






error: Content is protected !!
Scroll to Top