ಡ್ರಗ್ಸ್ ಜಾಲ ಪ್ರಕರಣ ➤ ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ನಿವಾಸದ ಮೇಲೆ ಪೊಲೀಸ್ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 05. ಡ್ರಗ್ಸ್ ಜಾಲದಲ್ಲಿ ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಸಂಜಯ್ ನಗರದಲ್ಲಿರುವ ಅವರ ನಿವಾಸದ ಮೇಲೆ ಬೆಂಗಳೂರು ಪೊಲೀಸರು ದಾಳಿ ನಡೆಸಿ, ವಶಕ್ಕೆ ಪಡೆದ ಘಟನೆ ವರದಿಯಾಗಿದೆ.

ಮಸ್ತಾನ್ ಚಂದ್ರ ಅವರು ನಿರ್ದೇಶಕ, ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದು, ಸಿತಾರ ಸೇರಿದಂತೆ ಹಲವಾರು ಸಿನಿಮಾಗಳನ್ನು ನಿರ್ದೇಶಿಸಿದ್ದರು. ಅಲ್ಲದೇ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಿಗ್‌ ಬಾಸ್ ಎಂಟ್ರಿ ಕೊಟ್ಟಿದ್ದರು. ಡ್ರಗ್ಸ್ ಜಾಲದಲ್ಲಿ ಇತ್ತೀಚೆಗೆ ಬಂಧನಕ್ಕೊಳಗಾಗಿರುವ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್‌‌‌‌ನೊಂದಿಗೆ ಮಸ್ತಾನ್ ಸಂಪರ್ಕದಲ್ಲಿದ್ದು ಸಿಸಿಬಿ ಪೊಲೀಸರು ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ಅನ್ನು ಬಂಧಿಸಿದ್ದರು. ವಿಚಾರಣೆಯ ವೇಳೆ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್, ಕೇಶವ್ ಹಾಗೂ ಮಸ್ತಾನ್ ಚಂದ್ರ ತನ್ನೊಂದಿಗೆ ಸಂಪರ್ಕದಲ್ಲಿದ್ದು, ಡ್ರಗ್ ಪೂರೈಸುತ್ತಿದ್ದೆ ಎಂದು ತಿಳಿಸಿದ್ದಾನೆ. ಈ ಮಾಹಿತಿಯ ಮೇರೆಗೆ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದ ಪೊಲೀಸರು, ಮಸ್ತಾನ್ ಹಾಗೂ ಕೇಶವ್ ಮನೆ ಮೇಲೆ ದಾಳಿ ನಡೆಸಿ, ವಶಕ್ಕೆ ಪಡೆದು ವಿಚಾರಣೆ ಪ್ರಾರಂಭಿಸಿದ್ದಾರೆ.

Also Read  ಬೆಳ್ಳಂಬೆಳಗ್ಗೆ ಪೊಲೀಸ್ ಫೈರಿಂಗ್ ➤‌ ಕಾಲಿಗೆ ಗುಂಡು ಹೊಡೆದು ಕೊಲೆ ಆರೋಪಿಗಳನ್ನು ಬಂಧಿಸಿದ ಪೊಲೀಸರು

error: Content is protected !!