ಪುತ್ತೂರು: ಬಸ್ ನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 09. ಯುವತಿಯೋರ್ವಳಿಗೆ ಬಸ್‌ ನಲ್ಲಿ ಕಿರುಕುಳ ಕೊಡುತ್ತಿದ್ದ ಆರೋಪಿಯೋರ್ವನನ್ನು ಸಾರ್ವಜನಿಕರು ರೆಡ್ ಹ್ಯಾಂಡ್ ಆಗಿ ಹಿಡಿದು ಪೋಲೀಸರಿಗೆ ಒಪ್ಪಿಸಿರುವ ಘಟನೆ ಸೋಮವಾರದಂದು ಗಡಿಪಿಲ ಎಂಬಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಪುತ್ತೂರಿನ ಬಸ್ ನಿಲ್ದಾಣದ ಬಳಿ ಅಂಗಡಿ ಹೊಂದಿರುವ ಬೆಟ್ಟಂಪಾಡಿಯ ನೌಫಲ್ ಎಂದು ಗುರುತಿಸಲಾಗಿದೆ. ಸೋಮವಾರದಂದು ಸಂಜೆ ಪುತ್ತೂರು- ಸವಣೂರು -ಆಲಂಕಾರು ಮೂಲಕ ಕಡಬಕ್ಕೆ ಹೋಗುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಖಾಸಗಿ ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿಯೋರ್ವರ ಜತೆ ಈತ ಅಸಭ್ಯವಾಗಿ ವರ್ತಿಸಿದ್ದು, ಇದನ್ನು ಗಮನಿಸಿದ ಸಂಘಟನೆಯ ಕಾರ್ಯಕರ್ತರು ಬಸ್ ವೀರಮಂಗಲ ಕ್ರಾಸ್‌ ನ ಗಡಿಪಿಲ ಎಂಬಲ್ಲಿಗೆ ತಲುಪುತಿದ್ದಂತೆಯೇ ಬಸ್ ಅನ್ನು ನಿಲ್ಲಿಸಿ ಆರೋಪಿಯನ್ನು ವಿಚಾರಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದರು. ಆರೋಪಿಯನ್ನು ಮಹಿಳಾ ಪೋಲಿಸ್ ಠಾಣೆಗೆ ಒಪ್ಪಿಸಲಾಗಿದೆ. ಈ ಕುರಿತು ಪುತ್ತೂರು ನಗರ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!

Join the Group

Join WhatsApp Group