ಸುಳ್ಯ: ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 10. ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಂಬು ಗ್ರಾಮದಲ್ಲಿ ನಡೆದಿದೆ.


ಆತ್ಮಹತ್ಯೆಗೈದವರನ್ನು ಮೋಹನ್ ಎಂದು ಗುರುತಿಸಲಾಗಿದೆ. ಟೈಲರ್ ವೃತ್ತಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಇವರು ಕುಂದಲಕಾಡು ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದು, ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ಪತ್ನಿ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

error: Content is protected !!
Scroll to Top