ಕಡಬ ಮೂಲದ ವ್ಯಕ್ತಿ ಮಂಗಳೂರಿನಲ್ಲಿ ಅನುಮಾನಾಸ್ಪದ ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.14. ಪತ್ನಿಯನ್ನು ಹೆರಿಗೆಗೆಂದು ತವರು ಮನೆಗೆ ಕಳುಹಿಸಿದ ವ್ಯಕ್ತಿಯೋರ್ವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಳ್ಳಾಲ ಎಂಬಲ್ಲಿ ಶನಿವಾರದಂದು ನಡೆದಿದೆ.

ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಬಲ್ಯ ನಿವಾಸಿ ರಾಧಾಕೃಷ್ಣ ಗೌಡ(40) ಎಂದು ಗುರುತಿಸಲಾಗಿದೆ. ಕುಂಪಲದ ಉಳ್ಳಾಲ ಬೈಲಿನಲ್ಲಿ ಆಟೋ ರಿಕ್ಷಾ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ವಾರದ ಹಿಂದೆಯಷ್ಟೇ ತನ್ನ ಪತ್ನಿಯನ್ನು ಹೆರಿಗೆಗೆಂದು ತವರು ಮನೆಗೆ ಕಳುಹಿಸಿದ್ದರು. ಶನಿವಾರ ಬೆಳಿಗ್ಗೆ ರಾಧಾಕೃಷ್ಣರವರು ಹೊರಬರದೆ ಇದ್ದುದರಿಂದ ಅನುಮಾನಗೊಂಡ ಮನೆಯ ಮಾಲಕರು ಕಿಟಕಿಯ ಮೂಲಕ ನೋಡಿದಾಗ ಅಡುಗೆ ಕೋಣೆಯಲ್ಲಿ ಬಿದ್ದಿರುವುದು ಕಂಡುಬಂದಿದ್ದು, ತಕ್ಷಣವೇ ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ಮುರಿದು ಒಳನುಗ್ಗಿ ಪರಿಶೀಲಿಸಿದಾಗ ಮೃತಪಟ್ಟಿರುವುದು ಕಂಡುಬಂದಿದೆ.

Also Read  ಭಾರೀ ಗಾಳಿ ಮಳೆಗೆ ಮರ ಬಿದ್ದ ಪರಿಣಾಮ ದನ ಹಾಗೂ ಮಹಿಳೆ ಸಾವು

 

 

error: Content is protected !!
Scroll to Top