ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್..⁉️ ➤ ಗೃಹ ಸಚಿವ ಬೊಮ್ಮಾಯಿ ಹೇಳಿದ್ದು ಹೀಗೆ..‼️

(ನ್ಯೂಸ್ ಕಡಬ) newskadaba.com ಧಾರವಾಡ, ಮಾ.21. ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ಹೆಚ್ಚಾಗುತ್ತಿರುವುದರ ನಡುವೆಯೇ ಮತ್ತೆ ಲಾಕ್‍ಡೌನ್ ಘೋಷಿಸುವ ಸಂಬಂಧ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ಭಾನುವಾರದಂದು ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೊರೋನಾ ಸೋಂಕು ನಿಯಂತ್ರಿಸಲು ಪರಿಣತರ ಸಮಿತಿಯು ಲಾಕ್‍ಡೌನ್ ಘೋಷಿಸುವಂತೆ ಶಿಫಾರಸು ಮಾಡಿದೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೊಂದಿಗೆ ಸಮಾಲೋಚನೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟನೆ ನೀಡಿದರು.

Also Read  ಡಿ.ಕೆ. ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

 

 

error: Content is protected !!