ಮಾಸ್ಕ್ ಧರಿಸದೆ ಇನ್ಮುಂದೆ ಯಾರೂ ಮನೆಯಿಂದ ಹೊರ ಬರಬೇಡಿ ➤ ದ.ಕ ಜಿಲ್ಲಾಧಿಕಾರಿ ಖಡಕ್ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 23. ಇನ್ಮುಂದೆ ಮಾಸ್ಕ್ ಧಾರಣೆ ಕಡ್ಡಾಯ, ನಿಯಮ ಮೀರಿದ್ದಲ್ಲಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ತೀವಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡದಲ್ಲಿ ಕೊರೊನಾ 2ನೇ ಅಲೆ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗ್ತಿದೆ. ಇವತ್ತು ಸಾಂಕೇತಿಕವಾಗಿ ಡಿಸಿ, ಡಿಸಿಪಿ, ಆರೋಗ್ಯಾಧಿಕಾರಿ ಮೂಲಕ ಮಾಸ್ಕ್ ಕಾರ್ಯಾಚರಣೆ ಮಾಡಲಾಗಿದ್ದು, ಮಂಗಳೂರು ನಗರದಲ್ಲಿ ಮಾಸ್ಕ್ ಧರಿಸದವರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ. ಕೊರೋನಾ ಎರಡನೇ ಅಲೆ ತಡೆಗಟ್ಟಲು ಎಲ್ಲರೂ ಸಹಕರಿಸಬೇಕು. ಜನರಿಗೆ ಜಾಗೃತಿ ಮೂಡಿಸಲು ಹಲವು ಕಾರ್ಯಗಳ ಯೋಜನೆ ರೂಪಿಸಲಾಗಿದೆ. ಪ್ರತಿ ದಿವಸ ಒಂದು ಗಂಟೆ ಜಾಗೃತಿ ಮೂಡಿಸಲಾಗುತ್ತಿದೆ. ಮಾಸ್ಕ್ ಧರಿಸದ ಬಸ್ ಚಾಲಕರು, ನಿರ್ವಾಹಕರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದರು. ಮದುವೆ ಸಮಾರಂಭಗಳಲ್ಲಿ ಮಾಸ್ಕ್ ಕಡ್ಡಾಯ. ಸಾರ್ವಜನಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಕಠಿಣ ನಿಯಮ ತರಲು ಚಿಂತನೆ ನಡೆಸಲಾಗಿದೆ. ಮಾಸ್ಕ್ ಧರಿಸದೇ ಯಾರೂ ಹೊರಗೆ ಬರಬೇಡಿ. ದಕ್ಷಿಣ ಕನ್ನಡದಲ್ಲಿ ಇನ್ಮುಂದೆ ಮಾಸ್ಕ್ ಧಾರಣೆ ಕಡ್ಡಾಯ ಎಂದರು.

Also Read  ಮಂಗಳೂರು: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

error: Content is protected !!
Scroll to Top