? ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಜೀವನ್ಮರಣ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 24. 10 ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬೆಳ್ತಂಗಡಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತಳನ್ನು ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ದೇವಗಿರಿ ನಿವಾಸಿ ಬಿಜು ಎಂಬವರ ಮಗಳು ವಿನ್ಸಿ (20 ) ಎಂದು ಗುರುತಿಸಲಾಗಿದೆ. ಈಕೆ ಮಾ .14 ರಂದು ವಿಷ ಸೇವಿಸಿ ಆತ್ಮಹತ್ಯೆಗೆತ್ನಿಸಿ, ತೀವ್ರ ಅಸ್ವಸ್ಥಗೊಂಡಿದ್ದು, ಜೀವನ್ಮರಣ ಸ್ಥಿತಿಯಲ್ಲಿ ಹೋರಾಟ ನಡೆಸುತ್ತಿದ್ದ ಈಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ 10 ದಿನಗಳ ಕಾಲ ನಡೆದ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಶಿಥಿಲಗೊಂಡ ಮನೆಯಲ್ಲಿ ಮತದಾನ ಮಾಡಿದ 104 ವರ್ಷದ ವೃದ್ಧೆ..!​ ➤ ಚರ್ಚೆಗೆ ಗ್ರಾಸವಾಯಿತು ಜಿಲ್ಲಾಧಿಕಾಯ ಫೇಸ್‌ಬುಕ್ ಪೋಸ್ಟ್.!​

error: Content is protected !!
Scroll to Top