ಮಂಗಳೂರಿನಲ್ಲಿ ಬೈಕ್ ಅಪಘಾತ ➤ ಕಡಬದ ಯುವಕ ಗಂಭೀರ



(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.24. ಬೈಕೊಂದು ಸ್ಕೂಟಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕಡಬದ ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರಿನ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.





ಗಂಭೀರ ಗಾಯಗೊಂಡಿರುವ ಯುವಕನನ್ನು ಕಡಬ ತಾಲೂಕಿನ ಮರ್ಧಾಳ ಸಮೀಪದ ಕೆರ್ಮಾಯಿ ನಿವಾಸಿ ಸನು ಅಬ್ರಹಾಂ (21) ಎಂದು ಗುರುತಿಸಲಾಗಿದೆ. ಸನು ಅಬ್ರಹಾಂ ಚಲಾಯಿಸುತ್ತಿದ್ದ ಯಮಹಾ ಯಂಟಿ ಬೈಕ್ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡಿರುವ ಸನು ಅಬ್ರಹಾಂ ಇದೀಗ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.






 

 

 

error: Content is protected !!
Scroll to Top