ಈಜಲೆಂದು ತೆರಳಿದ್ದ ವೇಳೆ ಕೊಳದಲ್ಲಿ ಮುಳುಗಿ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಹಾವೇರಿ, ಮಾ. 26. ಈಜಲು ಗೊತ್ತಿಲ್ಲದೇ ನೀರಿನಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟ ಘಟನೆ ಹಾವೇರಿಯಲ್ಲಿ ನಡೆದಿದೆ.

ಮೃತ ಬಾಲಕನನ್ನು ಮಯೂರಶೆಟ್ಟಿ (17) ಎಂದು ಗುರುತಿಸಲಾಗಿದೆ. ಈತ ನಗರದ ಜಿ.ಹೆಚ್ ಕಾಲೇಜಿನ ಗುರುಕೃಪಾ ಈಜುಕೊಳಕ್ಕೆ ಸ್ನೇಹಿತರೊಂದಿಗೆ ಈಜಲೆಂದು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ಕುರಿತು ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 

Scroll to Top