ಮಲ್ಪೆ: ಸ್ಮಶಾನದ ಬಳಿ ಮರಕ್ಕೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಲ್ಪೆ, ಮಾ. 30. ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆಯಲ್ಲಿ ನಡೆದಿದೆ.

 

ಆತ್ಮಹತ್ಯೆ ಮಾಡಿಕೊಂಡವರನ್ನು ಸಂತೋಷ್ ಕುಮಾರ್ (46) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಹೆಲ್ಪರ್ ಕೆಲಸ ಮಾಡಿಕೊಂಡಿದ್ದ ಇವರು ವಿಪರೀತ ಕುಡಿತದ ಚಟ ಹೊಂದಿದ್ದು, ಸರಿಯಾಗಿ ಕೆಲಸಕ್ಕೂ ಹೋಗದೆ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದರು ಎನ್ನಲಾಗಿದೆ. ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿದ ಇವರು ಗುಜ್ಜರಬೆಟ್ಟುವಿನ ಸ್ಮಶಾನಕ್ಕೆ ಹೋಗುವ ದಾರಿಯ ಬದಿಯಲ್ಲಿನ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group