ಮಂಗಳೂರು: ಖಾಸಗಿ ಬಸ್ಸಿನಡಿಗೆ ಬಿದ್ದು ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 31. ಖಾಸಗಿ ಬಸ್ಸಿನ ಅಡಿಗೆ ಬಿದ್ದು ಕಾಲೇಜು ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಮೃತಪಟ್ಟ ಘಟನೆ ಬುಧವಾರದಂದು ಬೆಳಗ್ಗೆ ನಗರದ ಮರಕಡ ಜಂಕ್ಷನ್ ನಲ್ಲಿ ನಡೆದಿದೆ.

 

ಮೃತ ವಿದ್ಯಾರ್ಥಿನಿಯನ್ನು ಚೆಲ್ಲಯ್ಯ ಅವರ ಪುತ್ರಿ, ಕಾವೂರು ಕುಂಜತ್ ಬೈಲ್ ಜ್ಯೋತಿನಗರ ನಿವಾಸಿ ಸಿ.ಪವಿತ್ರ (21) ಎಂದು ಗುರುತಿಸಲಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

 

Scroll to Top