ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆ ➤ ಮಾಜಿ ಪ್ರಧಾನಿ ದೇವೆಗೌಡ ಹಾಗೂ ಪತ್ನಿ ಚೆನ್ನಮ್ಮ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 31. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಸದ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. “ನಾನು ಮತ್ತು ನನ್ನ ಪತ್ನಿ ಚೆನ್ನಮ್ಮಗೆ ಕೋವಿಡ್ ಪಾಸಿಟಿವ್ ಬಂದಿದ್ದು, ನಮ್ಮ ಕುಟುಂಬದ ಸದಸ್ಯರಿಂದ ಸ್ವಯಂ ಆಗಿ ಪ್ರತ್ಯೇಕವಾಗಿರುತ್ತೇವೆ. ಕಳೆದ ಕೆಲವು ದಿನಗಳಿಂದ ನಮ್ಮೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ಕೋವಿಡ್ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡುತ್ತಿದ್ದೇವೆ. ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳು ಭಯಭೀತರಾಗದಂತೆ ನಾನು ವಿನಂತಿಸುತ್ತೇನೆ” ಎಂದು ದೇವೇಗೌಡರು ಟ್ವೀಟ್ ಮೂಲಕ ತಿಳಿಸಿದ್ದಾರೆ.

Also Read  ಪುತ್ತೂರು: ಯುವಕನೋರ್ವ ಹೊಳೆಗೆ ಹಾರಿ ಆತ್ಮಹತ್ಯೆ ಶಂಕೆ ಮುಂದುವರಿದ ತನಿಖೆ

error: Content is protected !!
Scroll to Top