ಇಂದಿನಿಂದ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ

(ನ್ಯೂಸ್ ಕಡಬ) newskadaba.com ಮ0ಗಳೂರು, ಜೂ.09. ಕೆಎಸ್‍ಆರ್‍ಟಿಸಿ ಮಂಗಳೂರು ವಿಭಾಗವು 2017-18ನೇ ಸಾಲಿಗಾಗಿ ವಿದ್ಯಾರ್ಥಿ ರಿಯಾಯಿತಿ ಬಸ್ಸು ಪಾಸುಗಳನ್ನು ವಿತರಿಸಲು ಸಿದ್ಧವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ.
ಪ್ರಸ್ತುತ ವರ್ಷ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿ ಪಾಸು ನೀಡಲಾಗುವುದು. (ಸಂಸ್ಕರಣ ಶುಲ್ಕ+ ಅಪಘಾತ ಪರಿಹಾರ ಶುಲ್ಕ ಪಾವತಿಸಬೇಕು) ಮೊದಲನೇ ಹಂತವಾಗಿ ಪ್ರಾಥಮಿಕ ಮತ್ತು ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಬಸ್ಸು ಪಾಸುಗಳನ್ನು ಸಂಬಂಧಪಟ್ಟ ಶೈಕ್ಷಣಿಕ ಸಂಸ್ಥೆಗಳ ಮೂಲಕ ವಿತರಿಸಲಾಗುವುದು. ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿ ಫಾರಂಗಳನ್ನು ನಿಗದಿತ ಶುಲ್ಕದೊಂದಿಗೆ ಸಂಬಂಧಪಟ್ಟ ಶೈಕ್ಷಣಿಕ ಸಂಸ್ಥೆಯಿಂದ ದೃಢೀಕರಿಸಿ ಮಂಗಳೂರು ಬಸ್ಸು ನಿಲ್ದಾಣದ ನಿಯಂತ್ರಣ ಕೊಠಡಿಯಲ್ಲ್ಲಿ ಸಲ್ಲಿಸಬೇಕು. ಶೈಕ್ಷಣಿಕ ಸಂಸ್ಥೆಯಿಂದ ಮತ್ತು ವಾಸ ಸ್ಥಳಕ್ಕೆ ಗರಿಷ್ಠ 60 ಕಿ.ಮೀ. ವರೆಗೆ  ಅಂತರವಿರುವ ವಿದ್ಯಾರ್ಥಿಗಳು ಮಾತ್ರ ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. 2017-18ನೇ ಸಾಲಿನ ಪಾಸಿನ ದರಗಳು: 1 ರಿಂದ 7ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ, (ಸಂಸ್ಕರಣ ಶುಲ್ಕ ತಲಾ ರೂ: 80 ಹಾಗೂ ಅಪಘಾತ ಪರಿಹಾರ ಶುಲ್ಕ ರೂ. 50) -ರೂ.130, ಹೈಸ್ಕೂಲ್ ವಿದ್ಯಾರ್ಥಿಗಳಿಗೆ 10 ತಿಂಗಳಿಗೆ -ರೂ. 600, ಹೈಸ್ಕೂಲ್ ವಿದ್ಯಾರ್ಥಿನಿಯರಿಗೆ 10 ತಿಂಗಳಿಗೆ ರೂ. 400, ಕಾಲೇಜು /ಡಿಪ್ಲೊಮಾ ವಿದ್ಯಾರ್ಥಿಗಳಿಗೆ- 10 ತಿಂಗಳಿಗೆ ರೂ.900, ಐಟಿಐ ವಿದ್ಯಾರ್ಥಿಗಳಿಗೆ 12 ತಿಂಗಳಿಗೆ ರೂ. 1150, ವೃತ್ತಿಪರ ಕೋರ್ಸ್‍ಗಳಾದ ವೈದ್ಯಕೀಯ ಇಂಜಿನಿಯರಿಂಗ್ ಇತರ ವಿದ್ಯಾರ್ಥಿಗಳಿಗೆ,  10 ತಿಂಗಳಿಗೆ ರೂ: 1400/-, ಸಂಜೆ ಕಾಲೇಜು/ ಪಿ ಹೆಚ್ ಡಿ ವಿದ್ಯಾರ್ಥಿಗಳಿಗೆ, 10 ತಿಂಗಳಿಗೆ ರೂ: 1200/- ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
error: Content is protected !!

Join the Group

Join WhatsApp Group