ವಿಟ್ಲ: ಕಾರು, ಜೀಪು, ಬೈಕ್ ಹಾಗೂ ಆಕ್ಟಿವಾ ನಡುವೆ ಸರಣಿ ಅಪಘಾತ ➤ ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಎ. 08. ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಡೆದಿದೆ.

ಪುತ್ತೂರಿನಿಂದ ಮಾಣಿ ಕಡೆಗೆ ತೆರಳುತ್ತಿದ್ದ ಜೀಪು ಹಾಗೂ ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ ಆಲ್ಟೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇದರ ತೀವ್ರತೆಗೆ ಜೀಪಿನ ಹಿಂದಿನಿಂದ ಬರುತ್ತಿದ್ದ ಬೈಕೊಂದು ನಿಯಂತ್ರಣ ತಪ್ಪಿ ಜೀಪಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸವಾರ ಗಾಯಗೊಂಡಿದ್ದಾನೆ. ಕಾರಿನ ಹಿಂದಿನಿಂದ ಬರುತ್ತಿದ್ದ ಆಕ್ಟೀವ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಸಹಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಘಟನೆಯಲ್ಲಿ ನಾಲ್ಕು ವಾಹನಗಳು ನಜ್ಜು ಗುಜ್ಜಾಗಿದ್ದು, ಜೀಪು ಚಾಲಕ ರಾಂಗ್ ಸೈಡ್ ನಿಂದ ಬಂದಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಬೈಕ್ ಸವಾರನನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಕಡಬ: ನಾಳೆ (ನ.06) ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಜನಜಾಗೃತಿ ಸಮಾವೇಶ

error: Content is protected !!
Scroll to Top