ಮಾಜಿ ಸಚಿವ ಯು.ಟಿ ಖಾದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ ➤ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ದಾವಣಗೆರೆ, ಎ. 14. ಮಾಜಿ ಸಚಿವ ಯು.ಟಿ. ಖಾದರ್ ರವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಇಲ್ಲಿನ ಆನಗೋಡು ಬಸ್ ನಿಲ್ದಾಣದ ಸರ್ವಿಸ್ ರಸ್ತೆ ಸಮೀಪ ಇಂದು ಬೆಳಗ್ಗೆ ನಡೆದಿದೆ.

ಯು.ಟಿ ಖಾದರ್ ಅವರು ಬೆಳಗಾವಿ ಉಪಚುನಾವಣೆಯ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಆನಗೋಡು ಹಂಪ್ಸ್ ಸಮೀಪ ಕಂಟೈನರ್‌ಗೆ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಎಸ್.ಪಿ. ಹನುಮಂತರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top