ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ. 17. ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೂ ಕೊರೋನಾ ಪಾಸಿಟಿವ್ ಬಂದಿದ್ದು, ಈ ಕುರಿತು ಸ್ವತಃ ಕುಮಾರಸ್ವಾಮಿಯವರೇ ಟ್ವೀಟ್ ಮೂಲಕ ಮಾಹಿತಿ ತಿಳಿಸಿದ್ದಾರೆ.

ನನಗೆ ಕೋವಿಡ್- 19 ಪರೀಕ್ಷೆಯಲ್ಲಿ ಪಾಸಿಟಿವ್ ರಿಪೋರ್ಟ್ ಬಂದಿದ್ದು, ಹಾಗಾಗಿ ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕಕ್ಕೆ ಬಂದವರೆಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ. ಕಳೆದ ಕೆಲವು ದಿನಗಳಿಂದ ಉಪಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದು, ಈ ವೇಳೆ ಶೀತ, ಜ್ವರ ಕಾಣಿಸಿಕೊಂಡ ಪರಿಣಾಮ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದರು. ಇದೀಗ ಪರೀಕ್ಷಾ ವರದಿಯು ಪಾಸಿಟಿವ್ ಬಂದಿದೆ.

Also Read  ಪದವೀಧರರ/ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ

error: Content is protected !!
Scroll to Top