(ನ್ಯೂಸ್ ಕಡಬ) newskadaba.com ಬೆಂಗಳೂರು, ಎ. 26. ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಸರ್ಕಾರವು ಜನರು ಗುಂಪು ಸೇರುವುದನ್ನು ನಿರ್ಬಂಧಿಸಿದೆ. ಇದೀಗ ಅಂತ್ಯಕ್ರಿಯೆಯಲ್ಲಿ 5 ಮಂದಿ ಮಾತ್ರವೇ ಭಾಗವಹಿಸಬೇಕು ಎಂಬ ಮಹತ್ವದ ಆದೇಶವೊಂದನ್ನು ಹೊರಡಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮುಖ್ಯ ಆಯುಕ್ತರು, ಪೊಲೀಸ್ ಆಯುಕ್ತರು, ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಇತರ ಇಲಾಖೆಯ ಮುಖ್ಯಸ್ಥರು ಹಾಗೂ ಅಧಿಕಾರಿಗಳು ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ.
Also Read ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಭೆ ➤ ಕಸ್ತೂರಿ ರಂಗನ್ ವರದಿ ಬಾದಿತ ಗ್ರಾ. ಪಂ ಎದುರು ಧರಣಿ ಸತ್ಯಾಗ್ರಹ.!