ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ ➤ ಮೂವರ ದುರ್ಮರಣ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಎ. 26. ಚಾಲಕನ ನಿಯಂತ್ರಣ ತಪ್ಪಿದ ಟೆಂಪೋವೊಂದು ಪಲ್ಟಿಯಾದ ಪರಿಣಾಮ ಮಗು ಸೇರಿದಂತೆ ಮೂರು ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಚಿತ್ರದುರ್ಗದ ಹಿರಿಯೂರು ಪಟ್ಟಣದ ಹೊರ ವಲಯದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

ಮೃತರನ್ನು ಹಿರಿಯೂರು ನಿವಾಸಿಗಳಾದ ಸೆಲ್ವಿ (35), ದೀಪಿಕಾ (06) ಹಾಗೂ ನೀಲಮ್ಮ (29) ಎಂದು ಗುರುತಿಸಲಾಗಿದೆ. ಟೆಂಪೋದಲ್ಲಿ ಕಾಂಕ್ರೀಟ್ ಕೆಲಸದ ಕೂಲಿ ಕಾರ್ಮಿಕರನ್ನು ಹಿರಿಯೂರಿನಿಂದ ಚಳ್ಳಕೆರೆಗೆ ಸಾಗಿಸುತ್ತಿದ್ದ ವೇಳೆ ಹಿರಿಯೂರು ಪಟ್ಟಣದ ಹೊರ ವಲಯದಲ್ಲಿ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಹಿರಿಯೂರು ಸಿಪಿಐ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top