ರಾಜ್ಯದಲ್ಲಿಂದು 48 ಸಾವಿರದ ಗಡಿ ದಾಟಿ ಕೊರೋನಾ ಸೋಂಕು➤ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1205 ಮಂದಿಗೆ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.30. ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯು ಕಾಡ್ಗಿಚ್ಚಿನಂತೆ ಹರಡುತ್ತಿದ್ದು, ಹಿಂದಿನ ದಾಖಲೆಯನ್ನು ಮುರಿದು ಹೊಸ ದಾಖಲೆ ನಿರ್ಮಾಣವಾಗಿದೆ.

ಆರೋಗ್ಯ ಇಲಾಖೆಯ ವರದಿಯಂತೆ ಶುಕ್ರವಾರದಂದು ರಾಜ್ಯದಲ್ಲಿ 48296 ಮಂದಿಗೆ ಕೊರೋನಾ ಸೋಂಕು ತಗುಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 1205 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇಂದು ಸೋಂಕಿನಿಂದ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

 

 

 

Scroll to Top