ಬಂಟ್ವಾಳ: ಯುವಕನಿಗೆ ಚೂರಿ ಇರಿತ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) Newskadaba.com ಬಂಟ್ವಾಳ, ಮೇ. 01. ಬಿ.ಸಿ.ರೋಡ್ ಅಜ್ಜಿಬೆಟ್ಟು ಎಂಬಲ್ಲಿ ಯುವಕನೋರ್ವನಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಬಿ.ಸಿ.ರೋಡ್ ಕೈಕಂಬ ಸಮೀಪದ ಪರ್ಲ್ಯ ನಿವಾಸಿಗಳಾದ ಇಮ್ರಾನ್ ಹಾಗೂ ಸಫ್ವಾನ್ ಎಂದು ಗುರುತಿಸಲಾಗಿದೆ. ಬ್ರಹ್ಮರಕೂಟ್ಲು ನಿವಾಸಿ ಮನೋಜ್ ಸಪಲ್ಯ ಎಂಬವರಿಗೆ ಎ. 04ರಂದು ರಾತ್ರಿ ಬಿ.ಸಿ.ರೋಡ್ ಬಳಿಯ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ಸ್ಕೂಟರ್ ನಲ್ಲಿ ಬಂದ ಇಬ್ಬರು ಚೂರಿಯಿಂದ ಇರಿದು ಪರಾರಿಯಾಗಿದ್ದರು ಎಂದು ದೂರು ದಾಖಲಿಸಲಾಗಿತ್ತು. ಈ ಪ್ರಕರಣದ ತನಿಖೆಗೆ ಪೊಲೀಸರು ಮೂರು ತಂಡಗಳನ್ನು ರಚಿಸಿದ್ದು, ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

Scroll to Top