(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.01. ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯು ಕಾಡ್ಗಿಚ್ಚಿನಂತೆ ಹರಡುತ್ತಿದ್ದು, ದಾಖಲೆಯ ಪ್ರಮಾಣದಲ್ಲಿ ಸೋಂಕು ಪತ್ತೆಯಾಗುತ್ತಿದೆ.
ಆರೋಗ್ಯ ಇಲಾಖೆಯ ವರದಿಯಂತೆ ಶುಕ್ರವಾರದಂದು ರಾಜ್ಯದಲ್ಲಿ 40990 ಮಂದಿಗೆ ಕೊರೋನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಇಂದು 271 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 933 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಇಬ್ಬರು ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.