ಮರ್ಧಾಳ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪಿಕಪ್

(ನ್ಯೂಸ್ ಕಡಬ) newskadaba.com ಕಡಬ, ಮೇ.03. ಚಾಲಕನ ನಿಯಂತ್ರಣ ಪಿಕಪ್ ವಾಹನವೊಂದು ರಸ್ತೆಯಲ್ಲೇ ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಸೋಮವಾರದಂದು ನಡೆದಿದೆ.

ಕಡಬದಿಂದ ಸುಂಕದಕಟ್ಟೆ ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ಕಲ್ಲಾಜೆ ಸಮೀಪದ ತಿರುವಿನಲ್ಲಿ ಮಗುಚಿ ಬಿದ್ದಿದೆ. ಘಟನೆಯಲ್ಲಿ ಪಿಕಪ್ ವಾಹನದಲ್ಲಿದ್ದ ಇಬ್ಬರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 

 

Scroll to Top