ರಾಜ್ಯದಲ್ಲಿ ಕೊರೋನಾ ಮೇಳೈಸುತ್ತಿರುವ ಹಿನ್ನೆಲೆ ➤ ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ | ಪ್ರಥಮ ಪಿಯು ಪರೀಕ್ಷೆ ರದ್ದು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.03. ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇದೇ ತಿಂಗಳ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸೋಂಕು ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪಬ್ಲಿಕ್ ಪರೀಕ್ಷೆಯನ್ನು ಮುಂದೂಡಲಾಗಿದೆ. ಅಲ್ಲದೇ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ರದ್ದು ಮಾಡಲಾಗಿದೆ ಎಂದವರು ತಿಳಿಸಿದ್ದಾರೆ.

Also Read  ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಬಂಟ್ವಾಳದ ಯುವಕ ಮೃತ್ಯು..!

 

 

error: Content is protected !!
Scroll to Top