ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಕಂಟೇನರ್ ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮೇ.08. ಚಾಲಕನ ನಿಯಂತ್ರಣ ತಪ್ಪಿದ ಕಂಟೇನರ್ ಲಾರಿಯೊಂದು ರಸ್ತೆ ಬದಿಯ ಆಳದ ಕಮರಿಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಪೆರಿಯಶಾಂತಿ ಎಂಬಲ್ಲಿ ಶನಿವಾರ ಮುಂಜಾನೆ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿಯು ಪೆರಿಯಶಾಂತಿ ಬಳಿ ರಸ್ತೆ ಅಗಲೀಕರಣಕ್ಕೆಂದು ತೆಗೆಯಲಾಗಿದ್ದ ಆಳವಾದ ಕಮರಿಗೆ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಲಾರಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

 

 

Scroll to Top