ನೆಲ್ಯಾಡಿ: ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾದ ಲಾರಿ ► ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ.24. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಎಂಬಲ್ಲಿ ಬೈಕಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.

ಘಟನೆಯಲ್ಲಿ ಬೈಕ್ ಸವಾರ ಪಾಪಚ್ಚನ್(60) ಸ್ಥಳದಲ್ಲೇ ಮೃತಪಟ್ಟಿದ್ದು, ಢಿಕ್ಕಿ ಹೊಡೆದ ನಂತರ ಲಾರಿಯೊಂದಿಗೆ ಚಾಲಕ ಬೆಳ್ತಂಗಡಿ ನಿವಾಸಿ ರಮೇಶ್ ಪರಾರಿಯಾಗಿದ್ದು, ಸ್ಥಳೀಯರ ಮಾಹಿತಿಯಂತೆ ನೆಲ್ಯಾಡಿಯಲ್ಲಿ ಲಾರಿಯನ್ನು ಅಡ್ಡಗಟ್ಟಿ ಚಾಲಕನನ್ನು ಹಿಡಿದಿಟ್ಟು ಪೊಲೀಸರ ವಶಕ್ಕೆ ಒಪ್ಪಿಸಲಾಯಿತು. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Scroll to Top