(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.19. ರಾಜ್ಯದಲ್ಲಿ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಲಾಕ್‍ಡೌನ್ ಘೋಷಿಸಿರುವ ಸರಕಾರವು ಸಾಲ ಮರುಪಾವತಿಗೆ ಮೂರು ತಿಂಗಳ ಕಾಲ ವಿನಾಯಿತಿ ನೀಡಿ ಆದೇಶಿಸಿದೆ.
ಸ್ವಸಹಾಯ ಸಂಘಗಳಿಂದ ಸಾಲ ಪಡೆದಿರುವವರಿಗೆ ಸಾಲದ ಕಂತುಗಳ ಮರು ಪಾವತಿಗೆ ಮೂರು ತಿಂಗಳ ಕಾಲ ಅವಕಾಶವನ್ನು ಕಲ್ಪಿಸಲಾಗಿದ್ದು, ಜುಲೈ ಅಂತ್ಯದವರೆಗೆ ಸಾಲದ ಕಂತುಗಳನ್ನು ಮರುಪಾವತಿ ಮಾಡಬೇಕಾಗಿಲ್ಲ. ಅಲ್ಲದೇ ಈ ಅವಧಿಯಲ್ಲಿನ ಸಾಲದ ಮೇಲಿನ ಬಡ್ಡಿಯನ್ನು ರಾಜ್ಯ ಸರಕಾರವೇ ಭರಿಸಲಿದೆ. ಆದರೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಪಡೆದಿರುವ ಸಾಲದ ಕಂತುಗಳಿಗೆ ಹೊಸ ಆದೇಶ ಅನ್ವಯವಾಗುವುದಿಲ್ಲ. ರಾಷ್ಟ್ರೀಕೃತ ಬ್ಯಾಂಕುಗಳ ಸಾಲದ ಕುರಿತು ಆರ್ ಬಿಐ ನಿರ್ಧಾರ ಮಾಡಲಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
Also Read ಜನವರಿ 1 ರಂದು ಸತ್ತ ವ್ಯಕ್ತಿ ಜೀವಂತವಾಗಿ ಪತ್ತೆ ► ಎಂಟು ತಿಂಗಳ ನಂತರ ಪ್ರತ್ಯಕ್ಷವಾದ ಸೆಕ್ಯೂರಿಟಿ ಗಾರ್ಡ್