(ನ್ಯೂಸ್ ಕಡಬ) newskadaba.com ಪುತ್ತೂರು, ಅ.25. ಹೋಂಡಾ ಆಕ್ಟಿವಾ ವಾಹನವೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟ ಘಟನೆ ಪುತ್ತೂರು ದರ್ಬೆ ವೃತ್ತದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.
ಮೃತರನ್ನು ಸಹ್ಯಾದ್ರಿ ಕಾಲೇಜಿನ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಪುತ್ತೂರು ಸಿಟಿ ಬಝಾರ್ ಮಾಲಕ ಕೂರ್ನಡ್ಕ ನಿವಾಸಿ ಹಸೈನಾರ್ ಹಾಜಿ ಎಂಬವರ ಪುತ್ರಿ ಸಮ್ರೀನಾ ಎಂದು ಗುರುತಿಸಲಾಗಿದೆ. ಈಕೆ ಆಕ್ಟಿವಾದಲ್ಲಿ ತೆರಳುತ್ತಿರುವಾಗ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದ್ದು, ಗಾಯಗೊಂಡ ಈಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟರೆನ್ನಲಾಗಿದೆ. ಪುತ್ತೂರು ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.