(ನ್ಯೂಸ್ ಕಡಬ) newskadaba.com ಕಡಬ, ಮೇ.14. ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರದಂದು ಕಡಬದಲ್ಲಿ ನಡೆದಿದೆ.
ಮೃತ ಯುವಕನನ್ನು ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದ ಬಡಬೆಟ್ಟು ನಿವಾಸಿ ತಂಗಚ್ಚನ್ ಎಂಬವರ ಪುತ್ರ ಲಿಜು (35) ಎಂದು ಗುರುತಿಸಲಾಗಿದೆ. ಮೃತರು ಸೋಮವಾರ ಬೆಳಿಗ್ಗೆ ತನ್ನ ಮನೆಯ ಮುಂಭಾಗದಲ್ಲಿ ಕಬ್ಬಿಣದ ಸಲಾಕೆಯಿಂದ ತೆಂಗಿನಕಾಯಿ ತೆಗೆಯುತ್ತಿದ್ದ ವೇಳೆ ಸಲಾಕೆಯು ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ವಿದ್ಯುತ್ ಹರಿದು ಲಿಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.