(ನ್ಯೂಸ್ ಕಡಬ) Newskadaba.com ಪುತ್ತೂರು, ಮೇ. 24. ಲಾಕ್‌ಡೌನ್‌ನಿಂದ ಆರ್ಥಿಕ ಸಂಕಷ್ಟಕ್ಕೊಳಗಾಗಿ ಹಲವು ವಿದ್ಯಾರ್ಥಿಗಳು ಕಾಲೇಜು ಫೀಸು ಪಾವತಿ ಮಾಡಲು ಸಮಯಾವಕಾಶ ನೀಡುವಂತೆ ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ವತಿಯಿಂದ ತಹಶೀಲ್ದಾರ್‌ರವರಿಗೆ ಮನವಿ ಸಲ್ಲಿಸಲಾಯಿತು.
ಲಾಕ್‌ಡೌನ್‌ನಲ್ಲಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ ಪ್ರಾರಂಭಿಸಲಾಗಿದ್ದು, ಆದರೆ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಹಲವಾರು ವಿದ್ಯಾರ್ಥಿಗಳು ಕಾಲೇಜು ಶುಲ್ಕ ಪಾವತಿ ಮಾಡದಿರುವ ಕಾರಣ ಆನ್‌ಲೈನ್ ತರಗತಿಗೆ ಸೇರಿಸದೆ ವಿದ್ಯಾರ್ಥಿಗಳಿಗೆ ಒತ್ತಡ ಹೇರುತ್ತಿದೆ. ಇದರಿಂದ ಪೋಷಕರು ತಮ್ಮ ಮಕ್ಕಳ ಶೈಕ್ಷಣಿಕ ಭವಿಷ್ಯದ ಬಗ್ಗೆ ಆತಂಕಕ್ಕೊಳಗಾಗಿದ್ದಾರೆ. ಹಾಗಾಗಿ ಇಲ್ಲಿನ ಆಡಳಿತ ವ್ಯವಸ್ಥೆ ಇದರ ಬಗ್ಗೆ ಗಮನಹರಿಸಿ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಗೆ ಹೆಚ್ಚಿನ ಕಾಲಾವಕಾಶ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಸಮಿತಿ ಸದಸ್ಯರಾದ ಅಫ್ರೀದ್ ಕೂರ್ನಡ್ಕ, ಸಮ್ಮಾಶ್ ಬನ್ನೂರ್, ಸಬೀರ್ ಕಲ್ಲರ್ಪೆ, ಮತ್ತಿತರರು ಉಪಸ್ಥಿತರಿದ್ದರು.